Heart attack cases in Hassan; ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. 40 ದಿನದ ಅಂತರದಲ್ಲಿ 21 ಜನರು ಹೃದಯಾಘಾತದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಈ ಸರಣಿ ಸಾವು ರಾಜ್ಯದಲ್ಲಿ ಆತಂಕ ಸೃಷ್ಟಿಸಿದೆ. ಇದರಿಂದ ಎಚ್ಚೆತ್ತುಕೊಂಡ ಸರ್ಕಾರ, ರಾಜ್ಯ ಆರೋಗ್ಯ ಇಲಾಖೆ ಮೂಲಕ ಜಯದೇವ ನಿರ್ದೇಶಕರಾದ ಡಾ.ರವೀಂದ್ರನಾಥ ನೇತೃತ್ವದಲ್ಲಿ ಸಮಿತಿ ರಚಿಸಿದೆ. ಸಾವಿನ ಬಗ್ಗೆ ವರದಿ ನೀಡುವಂತೆ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತಾ ಸಮಿತಿಗೆ ಸೂಚಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಕೂಡ ಕಳವಳ ವ್ಯಕ್ತಪಡಿಸಿದ್ದು, ಜನರ ಆರೋಗ್ಯ ರಕ್ಷಣೆಗಾಗಿ ಸರ್ಕಾರ ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಮಾಡುತ್ತದೆ. ಸಾರ್ವಜನಿಕರು ಎದೆನೋವು, ಉಸಿರಾಟದ ತೊಂದರೆ ಕಂಡುಬಂದರೆ ಅಲಕ್ಷ್ಯ ತೋರಿಸದೇ ತಕ್ಷಣವೇ ಸಮೀಪದ ಆರೋಗ್ಯ ಕೇಂದ್ರಗಳಿಗೆ ತೆರಳಿ ಪರೀಕ್ಷೆಗೆ ಒಳಗಾಗಬೇಕು ಎಂದು ಮನವಿ ಮಾಡಿದ್ದಾರೆ. ಈ ಬಗ್ಗೆ ತಮ್ಮ X ಖಾತೆಯಲ್ಲಿ ಸರ್ಕಾರ ತೆಗೆದುಕೊಂಡ ನಿರ್ಧಾರ ಕುರಿತು ಅವರು ಮಾಹಿತಿ ಹಂಚಿಕೊಂಡಿದ್ದಾರೆ.











