ಮೈಸೂರಿನ ಜಿಎಸ್ಎಸ್ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಡಿ.ಶ್ರೀಹರಿ ಅವರಿಗೆ ”ಕರುನಾಡ ಪ್ರಭು ಕೆಂಪೇಗೌಡ-2025” ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ನಾಡಪ್ರಭು ಕೆಂಪೇಗೌಡರ ಜಯಂತಿಯ ಅಂಗವಾಗಿ ಪ್ರತಿ ವರ್ಷ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ, ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಈ ವರ್ಷ ಹಲವಾರು ಸಾಧಕರ ಜೊತೆಗೆ ಯೋಗಾತ್ಮ ಶ್ರೀಹರಿ ಅವರು ತಮ್ಮ ಸಮಾಜ ಸೇವೆ ಮತ್ತು ಯೋಗಕ್ಕೆ ನೀಡಿದ ಕೊಡುಗೆಗಾಗಿ ಪ್ರಶಸ್ತಿ ಪಡೆದುಕೊಂಡು ಮತ್ತೊಂದು ಗರಿಮೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಜಿಎಸ್ಎಸ್ ಯೋಗಿಕ್ ರಿಸರ್ಚ್ ಫೌಂಡೇಶನ್ ಮುಖ್ಯಸ್ಥರಾದ ಡಿ.ಶ್ರೀಹರಿ ಅವರು ಹಲವಾರು ಸಾಧಕರ ಜೊತೆಗೆ ಪ್ರಶಸ್ತಿ ಸ್ವೀಕರಿಸಿದ್ದಾರೆ.
ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಪ್ರತಿಷ್ಠಾನದ ಅಧ್ಯಕ್ಷರಾದ ಪ್ರೊ.ಎಂ. ಕೃಷ್ಣೇಗೌಡ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ವಿಧಾನಸಭೆ ಪ್ರತಿ ಪಕ್ಷದ ನಾಯಕ ಆರ್. ಅಶೋಕ್, ಆದಿ ಚುಂಚನಗಿರಿ ಮಠದ ಶ್ರೀ ನಿರ್ಮಲಾ ನಂದನಾಥ ಸ್ವಾಮೀಜಿ, ಸ್ಪಟಿಕಪುರಿ ಮಠದ ಶ್ರೀ ನಂಜಾವಧೂತ ಸ್ವಾಮೀಜಿ, ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಶ್ರೀ ನಿಶ್ಚಲಾನಂದ ನಾಥ ಸ್ವಾಮಿ, ಕೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ, ಶಾಸಕರಾದ ಡಾ. ಅಶ್ವತ್ಥನಾರಾಯಣ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ರಾದ ಛಲವಾದಿ ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಸೇರಿದಂತೆ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.











